ಕಗ್ಗ: ಗಾಳಿ ಮಣ್ಣು೦ಡೆಯೊಳಹೊಕ್ಕು ಹೊರಹೊರಳಲದು | ಆಳೆನಿಪುದಂತಾಗದಿರೆ ಬರಿಯ ಹೆಂಟೆ || ಬಾಳೇನು ಧೂಳು ಸುಳಿ, ಮರ ತಿಕ್ಕಿದುರಿಯ ಹೊಗೆ| ಕ್ಶ್ವೇಳವೇನಮೃತವೇಂ ? – ಮಂಕುತಿಮ್ಮ ||
ಸಾರಾಂಶ: ಮಣ್ಣು೦ಡೆಯೊಳಹೊಕ್ಕು = ಮಣ್ಣ + ಉಂಡೆ + ಒಳ + ಹೊಕ್ಕು , ಹೊರಹೊರಳಲದು = ಹೊರ + ಹೊರಳಲು + ಅದು ಆಳೆನಿಪುದಂತಾಗದಿರೆ = ಆಳು + ಎನಿಪುದು + ಅಂತೆ + ಆಗದಿರೆ, ತಿಕ್ಕಿದುರಿಯ = ತಿಕ್ಕಿದ + ಉರಿಯ, ಕ್ಶ್ವೇಳವೇನಮೃತವೇಂ = ಕ್ಶ್ವೇಳವೇನು + ಅಮೃತವೇನು ಈ ದೇಹವನ್ನು ಮಣ್ಣು೦ಡೆಗೆ ಹೋಲಿಸಿದ್ದಾರೆ ಮತ್ತು ಈ ದೇಹದಲ್ಲಿ ಆಡುವ ಉಸಿರು (ಗಾಳಿ) ಆಡುತ್ತಿದ್ದರೆ ನಾವುಗಳು “ಆಳು” ಎಂದು ಎನ್ನಿಸಿ ಕೊಳ್ಳುತ್ತೇವೆ. ಇಲ್ಲದಿದ್ದರೆ ಈ ದೇಹ ಬರೀ ಮಣ್ಣಿನ ಹೆಂಟೆ ಎಂದು ಒಂದು ಅತ್ಯುತ್ತ್ತಮ ಸತ್ಯವನ್ನು ಪ್ರತಿಪಾದಿಸುತ್ತಾರೆ. ಇಂದು ನಮ್ಮ ಸ್ನೇಹಿತರೊಬ್ಬರು ಇದಕ್ಕೆ ಸರಿಯಾಗಿ” ಬಡಿತ ನಿಂತರೆ ಬಡಿವಾರ ಬಂದ್ ” ಎಂದು ಹಿಂದಿನ ಕಗ್ಗಕ್ಕೆ ಪ್ರತಿಕ್ರಿಯೆ ನೀಡಿ, ಬಹಳ ಸೂಕ್ತವಾಗಿ ಹೇಳಿದರು. ಬಹುಶಃ ಅವರಿಗೆ ಇಂದಿನ ಕಗ್ಗದ ಪರಿಚಯವಿತ್ತೇನೋ ಎಂದು ಅನ್ನಿಸುತ್ತದೆ. ಇರಲಿ ಗುಂಡಪ್ಪನವರು ಈ ಬಾಳನ್ನು ದೂಳ ಸುಳಿ ಎಂದು ಕರೆಯುತ್ತಾರೆ. ಇದು ಬಹಳ ಸೂಕ್ತವಾಗಿದೆ. ಏಕೆಂದರೆ, ನಾನು ಹಿಂದೆ ಒಮ್ಮೆ ಈ ಬ್ರಹ್ಮಾಂಡದ ವಿವರಣೆಯನ್ನು ಮಾಡುವಾಗ, ಇಡೀ ಬ್ರಹ್ಮಾಂಡವು ಎಷ್ಟು ದೊಡ್ಡದೆಂದರೆ, ಇದರೆದುರು ನಾವು ಒಂದು ದೂಳ ಕಣವೂ ಅಲ್ಲ ಎಂದು ಹೇಳಿದ್ದೆ. ಈಗ ಮಣ್ಣಿಂದ ಆದ, ಮತ್ತು ಈ ಸಮಸ್ತ ಭೂಮಂಡಲವನ್ನು ನಿವಾಸಸ್ಥಾನವನ್ನಾಗಿಸಿಕೊಂಡ ಪ್ರಾಣಿಗಳೆಲ್ಲವೂ ಧೂಳ ಕಣಗಳೇ ಎಂದು ಗುಂಡಪ್ಪನವರು ಹೇಳುತ್ತಾರೆ. ಮಣ್ಣಿಂದ ಆದ ಜೀವಕಣಗಳು ಮತ್ತು ಈ ಜೀವಕಣಗಳಿಂದಾದ ಈ ದೇಹವೂ ಮಣ್ಣಲ್ಲವೇ? “ಮಣ್ಣಿಂದ ಕಾಯ ಮಣ್ಣಿಂದ” ಎಂದು ನಾವು ಕೇಳಿಲ್ಲವೇ? ಹಾಗೆ ಮಣ್ಣಿಂದ ಆದ ಈ ದೇಹವನ್ನು ಮಣ್ಣ ಉಂಡೆ ಎಂದು ಹೇಳಿದ್ದಾರೆ. ಈ ಮಣ್ಣ ಉಂಡೆಯಲಿ ಗಾಳಿ ಆಡುತ್ತಿದ್ದರೆ ನಾವೂ ಸಹ “ಆಳು” ಅಂದರೆ ಮನುಷ್ಯ ಎಂದು ಕರೆಯಲ್ಪಡುತ್ತೇವೆ. ಇಲ್ಲದಿದ್ದರೆ ಬರೇ ಮಣ್ಣ ಉಂಡೆ. ಆಗ ನಮ್ಮನ್ನು ಹೆಣ ಎನ್ನುತ್ತಾರೆ ಹಾಗಿದ್ದರೆ ಈ ಬಾಳು ಅಂದರೆ ಜೀವನವು ಏನು? ಎಂದರೆ ಮಣ್ಣ ಕಣಗಳ ತಿಕ್ಕಾಟವೆನ್ನುತ್ತಾರೆ ಶ್ರೀ ಗುಂಡಪ್ಪನವರು. ಈ ತಿಕ್ಕಾಟದಲ್ಲಿ ಬೆಂಕಿ ಉಂಟಾಗುತ್ತದೆ ಮತ್ತು ಹೊಗೆಯಾಡುತ್ತದೆ ಸಮೀರ ( ಕನ್ನಡ ಭಾಷಾ ಶಿಕ್ಷಕಿ -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To post to this group, send an email to [email protected]. For more options, visit https://groups.google.com/d/optout.
