ತುಂಬಾ ಉತ್ತಮ ಮಾಹಿತಿ ಸರ್ ಧನ್ಯವಾದಗಳು
On Mon, Oct 2, 2017, 12:19 PM mahendra ks <[email protected]> wrote: > ಕೇವಲ 17 ತಿಂಗಳು ಪ್ರಧಾನಿಯಾಗಿದ್ದ ಶಾಸ್ತ್ರೀಜಿ, 17 ವರ್ಷಗಳ ಕಾಲ ದೇಶವನ್ನಾಳಿದ ನೆಹರು > ಅವರನ್ನೇ ಮೀರಿಸಿದ್ದರು. ಅದು ಕೆಲವರ ಕಣ್ಣು ಕೆಂಪಾಗಿಸಿತ್ತು. ಕಾಂಗ್ರೆಸ್ಸಿಗರ > ಹೊಟ್ಟೆಯಲ್ಲೇ ಕಿಚ್ಚು ಹೊತ್ತಿಕೊಂಡಿತ್ತು. > ಹತ್ಯಾರೋಂ ಕಾ ಜವಾಬ್, ಹತ್ಯಾರೋಂ ಸೆ ದೇಂಗೆ! > ಹಾಗಂತ 1965, ಆಗಸ್ಟ್ 15ರಂದು ಕೆಂಪುಕೋಟೆಯ ಮೇಲೆ ನಿಂತು ಪ್ರಧಾನಿ ಲಾಲ್‌ಬಹಾದ್ದೂರ್ > ಶಾಸ್ತ್ರಿಯವರು ಗುಡುಗಿದಾಗ ಅನುಮಾನಪಟ್ಟವರೇ ಹೆಚ್ಚು. ಜತೆಗೆ ದುರ್ಬಲ ಕಾಯದ ಈ > ವ್ಯಕ್ತಿಯಿಂದ ಏನು ತಾನೇ ಸಾಧ್ಯ ಎಂಬ ಅಸಡ್ಡೆ. > ಇದಾಗಿ ಎರಡು ವಾರಗಳಾಗಿವೆಯಷ್ಟೆ. > ಅವತ್ತು 1965, ಆಗಸ್ಟ್ 31ನೇ ತಾರೀಖು. ಹೊತ್ತಿಗೆ ಮೊದಲೇ ಪ್ರಧಾನಿ ಲಾಲ್ ಬಹದ್ದೂರ್ > ಶಾಸ್ತ್ರಿ ಮನೆಗೆ ಬಂದಿದ್ದರು. ಇನ್ನೇನು ಊಟಕ್ಕೆ ಕುಳಿತುಕೊಳ್ಳಬೇಕು. ಹತ್ತಿರಕ್ಕೆ ಬಂದ > ಆಪ್ತ ಕಾರ್ಯದರ್ಶಿಯೊಬ್ಬರು ಕಿವಿಯಲ್ಲೇನೋ ಪಿಸುಗುಟ್ಟಿದರು. ಹಸಿವನ್ನೇ ಮರೆತ > ಶಾಸ್ತ್ರಿಯವರು '10 ಜನಪಥ್' ರಸ್ತೆಯಲ್ಲಿದ್ದ ಪ್ರಧಾನಿ ಕಚೇರಿಯತ್ತ ನಡೆದೇ ಬಿಟ್ಟರು. > ಭೂಸೇನೆ, ವಾಯುಸೇನೆ ಮತ್ತು ನೌಕಾದಳದ ಮೂವರು ಮುಖ್ಯಸ್ಥರು ಪ್ರಧಾನಿಯ ಹಾದಿಯನ್ನೇ ಎದುರು > ನೋಡುತ್ತಿದ್ದರು. ಶಾಸ್ತ್ರಿಯವರು ಬಂದಿದ್ದೇ ತಡ ವೈಸ್ ಅಡ್ಮಿರಲ್ ಭಾಸ್ಕರ ಸದಾಶಿವ ಸೋಮನ್ > ಮತ್ತು ಏರ್‌ಚೀಫ್ ಮಾರ್ಷಲ್ ಅರ್ಜನ್ ಸಿಂಗ್ ಪ್ರಧಾನಿ ಕೊಠಡಿಯನ್ನು ಸೇರಿದರು. ಏನಿರಬಹುದು? > ಎಂದು ಉಳಿದವರು ಯೋಚಿಸುವ ಮೊದಲೇ ಎಲ್ಲರೂ ಹೊರಬಂದರು. > ಕೇವಲ 5 ನಿಮಿಷಗಳಲ್ಲಿ ಪ್ರಧಾನಿ ಶಾಸ್ತ್ರಿಯವರು ಎದೆ ಝಲ್ಲೆನಿಸುವಂತಹ ನಿರ್ಧಾರ > ಕೈಗೊಂಡಿದ್ದರು. > ಪಾಕ್‌ನ ಮೇಲೆ ಯುದ್ಧ ಘೋಷಣೆಯಾಗಿತ್ತು. > ಜಮ್ಮುವಿನ ಛಾಂಬ್ ವಿಭಾಗದಲ್ಲಿ ಅಂತಾರಾಷ್ಟ್ರೀಯ ಗಡಿಯನ್ನು ದಾಟಿದ್ದ ಪಾಕಿಸ್ತಾನಿ ಪಡೆಗಳು > ಸುಮಾರು ನೂರಕ್ಕೂ ಅಧಿಕ ಯುದ್ಧ ಟ್ಯಾಂಕ್‌ಗಳ ಮೂಲಕ ಭಾರತದ ಮೇಲೆ ಮುಗಿಬಿದ್ದಿದ್ದವು. > ಇನ್ನು ಕೆಲವೇ ಗಂಟೆಗಳಲ್ಲಿ ಇಡೀ ಕಾಶ್ಮೀರವೇ ದೇಶದ ಇತರ ಭಾಗಗಳೊಂದಿಗೆ ಸಂಪರ್ಕ > ಕಳೆದುಕೊಳ್ಳುವ ಅಪಾಯ ಎದುರಾಗಿತ್ತು. ಛಾಂಬ್ ಅನ್ನು ರಕ್ಷಿಸಿಕೊಳ್ಳುವುದು ಅಸಾಧ್ಯ ಎಂದು > ಅರ್ಜನ್ ಸಿಂಗ್ ಅನುಮಾನ ವ್ಯಕ್ತಪಡಿಸಿದ್ದರು. ಆದರೆ ಶಾಸ್ತ್ರೀಜಿ ಅಳುಕಲಿಲ್ಲ! ನೆಹರು > ಅವರಂತೆ ಗೋಗರೆಯುತ್ತ ವಿಶ್ವಸಂಸ್ಥೆಯ ಕದ ತಟ್ಟಲಿಲ್ಲ. > ಅಂತಾರಾಷ್ಟ್ರೀಯ ಒತ್ತಡದ ಬಗ್ಗೆಯೂ ಚಿಂತಿಸಲಿಲ್ಲ. ವಿಶ್ವದ ನಾಯಕರು ಏನನ್ನುತ್ತಾರೋ ಎಂದು > ಯೋಚಿಸಲಿಲ್ಲ. ಏಕೆಂದರೆ 'ಹಮಾರಾ ದೇಶ್ ರಹೇಗಾ ತೋ, ಹಮಾರಾ ತಿರಂಗಾ ರಹೇಗಾ' ಎಂದು ಹದಿನೈದು > ದಿನಗಳ ಹಿಂದಷ್ಟೇ ತಾವೇ ಹೇಳಿದ ಮಾತುಗಳನ್ನು ಅವರು ಮರೆತಿರಲಿಲ್ಲ. 'ಛಾಂಬ್ ಕೈ ಜಾರುವ > ಮೊದಲು, ಲಾಹೋರನ್ನು ವಶಪಡಿಸಿಕೊಳ್ಳಿ' ಎಂದು ಭಾರತೀಯ ಪಡೆಗಳಿಗೆ ನಿರ್ದೇಶನ ನೀಡಿಯೇ > ಬಿಟ್ಟರು! > ಎರಡನೇ ಜಾಗತಿಕ ಸಮರದ ನಂತರ ಭುಗಿಲೆದ್ದ ಅತಿ ದೊಡ್ಡ ಸಂಘರ್ಷ ಅದಾಗಿತ್ತು. ಏಕೆಂದರೆ ಎರಡೂ > ರಾಷ್ಟ್ರಗಳು ಸಾವಿರಕ್ಕೂ ಅಧಿಕ ಟ್ಯಾಂಕ್‌ಗಳೊಂದಿಗೆ ಪರಸ್ಪರ ಮುಗಿಬಿದ್ದಿದ್ದವು. > ಆರಂಭದಲ್ಲಿ ಪಾಕಿಸ್ತಾನದ್ದೇ ಮೇಲುಗೈ. ಅಮೆರಿಕ ದಾನ ಮಾಡಿದ್ದ ಸುಧಾರಿತ ಎಂ-48 ಪ್ಯಾಟನ್ > ಟ್ಯಾಂಕ್‌ಗಳನ್ನು ಹೊಂದಿದ್ದ ಪಾಕಿಸ್ತಾನದ ಎರಡು ಸೇನಾ ತುಕಡಿಗಳು ಭಾರತದ ಮೇಲೆ ಆಕ್ರಮಣ > ಮಾಡಿದರೆ, ನಮ್ಮ ಒಂದೇ ತುಕಡಿ ಶತ್ರುವನ್ನು ಹಿಮ್ಮೆಟ್ಟಿಸಬೇಕಿತ್ತು. > ಜತೆಗೆ ಪ್ರತಿ ದಾಳಿಯನ್ನು ಮಾಡಬೇಕಿತ್ತು. ಆದರೇನಂತೆ ಸಪ್ಟೆಂಬರ್ 10ರಂದು 'ಅಸಲ್ > ಉತ್ತರ್' (True North) ಬಳಿ ನಡೆದ ನಿರ್ಣಾಯಕ ಸಮರದಲ್ಲಿ ನಮ್ಮ ಸೈನಿಕರು ಪಾಕ್‌ನ 97 > ಟ್ಯಾಂಕ್‌ಗಳನ್ನು ವಶಪಡಿಸಿಕೊಂಡರು. ಲಾಹೋರನ್ನು ರಣರಂಗವಾಗಿಸಿದರು. ಶಾಸ್ತ್ರೀಜಿ ಅವರ > ತಾಕತ್ತಿನ ಬಗ್ಗೆ ಕೀಳಂದಾಜು ಮಾಡಿದ್ದ ಜನರಲ್ ಅಯೂಬ್‌ಖಾನ್ ಬೆದರಿದ. ಏಕೆಂದರೆ ಚೀನಾ > ಕೈಯಲ್ಲಿ ಸೋತಿದ್ದ ನಮ್ಮನ್ನು ಬಗ್ಗುಬಡಿಯಲು ಇದೇ ಸರಿಯಾದ ಸಮಯವೆಂದು ಭಾವಿಸಿದ್ದ > ಅಯೂಬ್‌ಖಾನ್‌ಗೆ ಶಾಸ್ತ್ರೀಜಿ ತಕ್ಕ ಪ್ರತ್ಯುತ್ತರ ನೀಡಿದ್ದರು. > ಈ ಮಧ್ಯೆ ಪಾಕಿಸ್ತಾನದ ಪರ ನಿಲುವು ತಳೆದಿದ್ದ ಚೀನಾ, ಯುದ್ಧದಲ್ಲಿ ಮೂಗು ತೂರಿಸುವ > ಮಾತಾಡಿತು. ಆದರೂ ಬೆದರಿಕೆಗೆ ಬಗ್ಗಲಿಲ್ಲ ಭಾರತ. ಯುದ್ಧ ಮುಂದುವರೆಯಿತು. ಏಕೆಂದರೆ ಅಂದು > ಪ್ರಧಾನಿಯಾಗಿದ್ದದ್ದು ನೆಹರು ಅಲ್ಲ. ಲಾಲ್ ಬಹಾದ್ದೂರ್ ಶಾಸ್ತ್ರಿ. ಹಾಗಾಗಿಯೇ 'ದೇಶಕ್ಕಾಗಿ > ಒಂದು ಹೊತ್ತು ಉಪವಾಸ ಮಾಡಿ' ಎಂಬ ಕರೆಗೆ 50 ಕೋಟಿ ಭಾರತೀಯರು ಮನಃಪೂರ್ವಕವಾಗಿ > ಓಗೊಟ್ಟಿದ್ದರು. > ಇತ್ತ ಪರಿಸ್ಥಿತಿ ತೀವ್ರ ಸ್ಥಿತಿಗೆ ತಲುಪಿತು. ಕೈ ಮೀರಿ ಹೋಗುವ ಲಕ್ಷಣ ಕಂಡುಬಂತು. > ಮುಂದಾಗಬಹುದಾದ ಅಪಾಯವನ್ನರಿತ ವಿಶ್ವಸಂಸ್ಥೆ ಮಧ್ಯ ಪ್ರವೇಶಿಸಿತು. ಫಲವಾಗಿ, ಸೆಪ್ಟೆಂಬರ್ > 21ರಂದು ಭಾರತ ಮತ್ತು ಪಾಕಿಸ್ತಾನಗಳ ನಡುವೆ ಕದನ ವಿರಾಮ ಒಪ್ಪಂದವೇರ್ಪಟ್ಟಿತು. ಅವುಗಳಲ್ಲಿ > 152 ಟ್ಯಾಂಕ್‌ಗಳನ್ನು ನಮ್ಮ ಸೈನಿಕರು ನಾಶಪಡಿಸುವ ಬದಲು ವಶಪಡಿಸಿಕೊಂಡಿದ್ದರು. > ಅದು ನಮ್ಮ ಬಹಾದ್ದೂರಿಕೆಯ ಪ್ರತೀಕವಾಗಿತ್ತು. ಆದರೆ ಪ್ರತಿಯಾಗಿ ಭಾರತ ಕಳೆದುಕೊಂಡಿದ್ದು > ಕೇವಲ 128 ಟ್ಯಾಂಕುಗಳು. > ಇತ್ತ ಶಾಸ್ತ್ರಿಯವರ ಬಗ್ಗೆ ಹಗುರವಾಗಿ ಮಾತಾಡಿದ್ದವರು ಯುದ್ಧ ಮುಗಿದ ಮೇಲೆ ಸೊಲ್ಲೇ > ಎತ್ತಲಿಲ್ಲ. ಅದೆಲ್ಲಕ್ಕಿಂತ ಮುಖ್ಯವಾಗಿ, 1962ರಲ್ಲಿ ಚೀನಾ ಆಕ್ರಮಣ ಮಾಡಿದಾಗ ನೆಹರು ಬದಲು > ಶಾಸ್ತ್ರೀಜಿ ಪ್ರಧಾನಿಯಾಗಿರಬೇಕಿತ್ತು ಎಂಬ ಭಾವನೆ ಜನಮನದಲ್ಲುಂಟಾಯಿತು. > ಸೋವಿಯತ್ ರಷ್ಯಾ, ಅಮೇರಿಕ ಮತ್ತು ಚೀನಾಗಳು ಹುಬ್ಬೇರಿಸಿದವು. ರಣರಂಗದಲ್ಲಿ > ಶಾಸ್ತ್ರಿಯವರನ್ನು ಮಣಿಸಲು ಸಾಧ್ಯವಿಲ್ಲ ಎಂಬುದನ್ನು ಅರಿತವು. ಮಾತುಕತೆಗೆ ಕರೆದವು. ಈಗಿನ > ಕಜಕಿಸ್ತಾನದ ತಾಷ್ಕೆಂಟ್‌ನಲ್ಲಿ ಸಂಧಾನ ಮಾತುಕತೆ ಏರ್ಪಾಡಾಯಿತು. > ಮುಂದಿನದ್ದು ಮಹಾನ್ ದುರಂತ! > ರಷ್ಯಾ ಪ್ರಧಾನಿ ಅಲೆಕ್ಸಿ ಕೊಸಿಗಿನ್ ಮಧ್ಯಸ್ಥಿಕೆಯಲ್ಲಿ 1966, ಜನವರಿಯಲ್ಲಿ ಲಾಲ್ > ಬಹಾದ್ದೂರ್ ಶಾಸ್ತ್ರಿ ಮತ್ತು ಅಯೂಬ್‌ಖಾನ್ ನಡುವೆ ಸಂಧಾನ ಪ್ರಾರಂಭವಾಯಿತು. 'ಮುಂದೆಂದೂ > ಬಲಪ್ರಯೋಗದ ಮೂಲಕ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಯತ್ನಿಸುವುದಿಲ್ಲ' ಎಂದು ಲಿಖಿತ ಭರವಸೆ > ನೀಡಬೇಕೆಂದು ಶಾಸ್ತ್ರೀಜಿ ಪಟ್ಟು ಹಿಡಿದರು. > ಅಯೂಬ್‌ಖಾನ್ ಒಪ್ಪದೇ ಹೋದಾಗ,''Then you will have to find another PM'' (ಹಾಗಾದರೆ > ನನ್ನ ನಂತರದ ಪ್ರಧಾನಿ ಬರುವವರೆಗೂ ಕಾಯಬೇಕಾಗುತ್ತದೆ!) ಎಂದು ಮುಖಕ್ಕೆ ಹೊಡೆದಂತೆ > ಹೇಳಿದರು. ಶಾಸ್ತ್ರಿಯವರನ್ನು ಬಗ್ಗಿಸಲು ಸಾಧ್ಯವಿಲ್ಲ ಎಂದು ಅರಿತ ಅಯೂಬ್ ಖಾನ್ ತಾನೇ > ಮಣಿದ. ಲಿಖಿತ ಭರವಸೆ ನೀಡಿದ. ಜನವರಿ 10ರಂದು ತಾಷ್ಕೆಂಟ್ ಒಪ್ಪಂದಕ್ಕೆ ಸಹಿ ಬಿತ್ತು. > ಆದರೆ ಸಹಿಯ ಶಾಯಿ ಆರುವ ಮೊದಲೇ, ಮಧ್ಯರಾತ್ರಿ 1 ಗಂಟೆ 32 ನಿಮಿಷಕ್ಕೆ ಭಾರತಕ್ಕೆ > ಬರಸಿಡಿಲು ಬಂದೆರಗಿತು! ಶಾಸ್ತ್ರೀಜಿ ಅನುಮಾನಾಸ್ಪದವಾಗಿ, 'ಹೃದಯಾಘಾತ'ಕ್ಕೊಳಗಾಗಿದ್ದರು. > ಗಾಂಧೀಜಿ ಕೊಲೆಯಾದ ನಂತರ ಮೊದಲಬಾರಿಗೆ ಇಡೀ ದೇಶವೇ ಕಂಬನಿಯ ಕೋಡಿಯಲ್ಲಿ ತೇಲಿ ಹೋಯಿತು. > ಕೇವಲ 17 ತಿಂಗಳು ಪ್ರಧಾನಿಯಾಗಿದ್ದ ಶಾಸ್ತ್ರೀಜಿ, 17 ವರ್ಷಗಳ ಕಾಲ ದೇಶವನ್ನಾಳಿದ ನೆಹರು > ಅವರನ್ನೇ ಮೀರಿಸಿದ್ದರು. > ಅದು ಕೆಲವರ ಕಣ್ಣು ಕೆಂಪಾಗಿಸಿತ್ತು. ಕಾಂಗ್ರೆಸ್ಸಿಗರ ಹೊಟ್ಟೆಯಲ್ಲೇ ಕಿಚ್ಚು > ಹೊತ್ತಿಕೊಂಡಿತ್ತು. ಹಾಗಾಗಿ ಶಾಸ್ತ್ರಿಯವರ ದುರಂತಮಯ ಅಧ್ಯಾಯ ಸಾವಿನ ನಂತರವೂ > ಮುಂದುವರಿಯಿತು. > ನೀಲಿಗಟ್ಟಿದ್ದ ದೇಹ ಭಾರತಕ್ಕೆ ಬಂತು! > ಆದರೆ ಶವ ಪರೀಕ್ಷೆ ನಡೆಯಲಿಲ್ಲ > ಕೆಲವು ಕೃತಘ್ನ ಭಾರತೀಯರೇ ಶಾಸ್ತ್ರಿಯವರನ್ನು ಇತಿಹಾಸದ ಕಸದ ತೊಟ್ಟಿಗೆ ದೂಡಿ ಕೈ > ತೊಳೆದುಕೊಳ್ಳಲು ವ್ಯವಸ್ಥಿತ ಪಿತೂರಿ ನಡೆಸಿದ್ದರು. ಗಾಂಧೀಜಿ ಮತ್ತು ನೆಹರು ಅವರ ಅಂತ್ಯ > ಸಂಸ್ಕಾರ ನಡೆದ ಸ್ಥಳದಲ್ಲಿ ಶಾಸ್ತ್ರಿಯವರ ಅಂತ್ಯ ಸಂಸ್ಕಾರ ನಡೆಸಲು ಅಡ್ಡಗಾಲು ಹಾಕಿ, > ದೇಹವನ್ನು ಅಲಹಾಬಾದ್‌ಗೆ ಕೊಂಡೊಯ್ಯಲು ಹವಣಿಸಿದರು. > ಮೊದಲೇ ನೊಂದಿದ್ದ ಪತ್ನಿ ಲಲಿತಾಶಾಸ್ತ್ರಿ ದೇಶದ ಜನರ ಮುಂದೆ ಬಣ್ಣ ಬಯಲು ಮಾಡುವ ಬೆದರಿಕೆ > ಹಾಕಿದಾಗ ದಿಲ್ಲಿಯಲ್ಲೇ ಅಂತ್ಯಸಂಸ್ಕಾರ ನಡೆಸಲು ಅವಕಾಶ ಮಾಡಿಕೊಡಲಾಯಿತು. ಅಷ್ಟೇ ಅಲ್ಲ, > ಶಾಸ್ತ್ರೀಜಿಯವರ ಸಮಾಧಿ ಮೇಲೆ ಅವರದ್ದೇ ಆದ 'ಜೈ ಜವಾನ್, ಜೈ ಕಿಸಾನ್' ಘೋಷಣೆಯನ್ನು > ಕೆತ್ತುವುದಕ್ಕೂ ಅಡ್ಡಿಪಡಿಸಿದರು. > ಮತ್ತೆ ಲಲಿತಾಶಾಸ್ತ್ರಿ ಉಪವಾಸ ಸತ್ಯಾಗ್ರಹ ಮಾಡುವೆನೆಂದು ಬೆದರಿಕೆಯೊಡ್ಡಬೇಕಾಗಿ ಬಂತು. > ದುಃಖದಿಂದ ಹೊರಬರುವ ಮೊದಲೇ ಶಾಸ್ತ್ರೀಜಿ ಭಾವಚಿತ್ರ ಕಾಂಗ್ರೆಸ್ ಕಾರ್ಯಾಲಯದಿಂದಲೂ > ಕಣ್ಮರೆಯಾಯಿತು. ಇಂದಿರಾಪ್ರೇರಿತ ಕಾಂಗ್ರೆಸ್ಸಿಗರ ಪಿತೂರಿ ಆ ಮಟ್ಟಿಗಿತ್ತು. > 1904, ಅಕ್ಟೋಬರ್ 2ರಂದು ಕಾಶಿ ಸಮೀಪದ ಮೊಘಲ್ ಸರಾಯ್‌ನಲ್ಲಿ ಬಡ ಶಿಕ್ಷಕರ ಮಗನಾಗಿ > ಹುಟ್ಟಿದ ಲಾಲ್ ಬಹಾದ್ದೂರ್ ಶಾಸ್ತ್ರಿಯವರದ್ದು ಏಳುಬೀಳಿನ ಹಾದಿ. ಪ್ರಧಾನಿ ಸ್ಥಾನ > ಪಿತ್ರಾರ್ಜಿತ ಆಸ್ತಿಯಂತೆ ಬಂದಿದ್ದಲ್ಲ. ಬಾಲ ಗಂಗಾಧರ ತಿಲಕ್ ಅವರಿಂದ ಪ್ರಭಾವಿತರಾಗಿದ್ದ > ಅವರು 1921ರಲ್ಲಿ ಶಿಕ್ಷಣಕ್ಕೆ ಶರಣು ಹೊಡೆದು ಸ್ವಾತಂತ್ರ್ಯ ಚಳವಳಿಗೆ ಧುಮುಕಿದ್ದರು. ಆರು > ವರ್ಷ ಜೈಲುವಾಸವನ್ನೂ ಅನುಭವಿಸಿದ್ದರು. > ಆದರೆ ಸ್ವಾತಂತ್ರ್ಯಾನಂತರ ಕೇಂದ್ರ ಸಚಿವರಾದ ಶಾಸ್ತ್ರಿಯವರ ಏಳಿಗೆಯನ್ನು ನೆಹರು > ಸಹಿಸದಾದರು. ಅವರ ಅಸಹನೆ ಯಾವ ಮಟ್ಟಕ್ಕೆ ತಲುಪಿತೆಂದರೆ ಎಲ್ಲ ಖಾತೆಗಳನ್ನು ಕಿತ್ತುಕೊಂಡು > 'ಖಾತೆ ರಹಿತ' ಮಂತ್ರಿಯಾಗಿಸಿ ಅವಮಾನವನ್ನೂ ಮಾಡಿದರು. ಎಲ್ಲಿ ಶಾಸ್ತ್ರಿಯವರು > ಅಡ್ಡಗಾಲಾಗುತ್ತಾರೋ ಎಂಬ ಭಯದಿಂದ 'ನೆಹರು ನಂತರ ಯಾರು?' ಎಂಬ ಪ್ರಶ್ನೆಯನ್ನು ಸ್ವತಃ > ಹುಟ್ಟು ಹಾಕಿ ತನ್ನ ಮಗಳು ಇಂದಿರಾ ಗಾಂಧಿಯವರನ್ನು ಉತ್ತರಾಧಿಕಾರಿಯಾಗಿ ಮಾಡಲು ಹವಣಿಸಿದರು. > ಶಾಸ್ತ್ರಿಯವರ ನಿಗೂಢ ಮರಣದೊಂದಿಗೆ ನೆಹರು ಆಸೆ ಈಡೇರಿತು. > ಇಂದಿರಾ ಪ್ರಧಾನಿಯಾದರು. ಭಾರತ ಮತ್ತೆ ನೆಹರು ಕುಟುಂಬಕ್ಕೆ ನೇಣು ಹಾಕಿಕೊಂಡಿತು. > ಶಾಸ್ತ್ರೀಜಿ ಪಠ್ಯ ಪುಸ್ತಕಗಳ ಒಂದೆರಡು ಪ್ಯಾರಾಗಳಿಗೆ ಸೀಮಿತರಾದರು. ಇತಿಹಾಸ ತನ್ನ ಧೀರ > ಪುತ್ರನನ್ನೇ ಮರೆಯುವಂತಾಯಿತು. > ಏಕೆ ಈ ಮಾತು ಹೇಳಬೇಕಾಗಿದೆ ಗೊತ್ತಾ? > ಅಕ್ಟೋಬರ್ 2ರಂದೇ ಜನಿಸಿದ ಈ ದೇಶದ ಮತ್ತೊಬ್ಬ ಸುಪುತ್ರ ಹಾಗೂ ಜನಪ್ರಿಯ ಪ್ರಧಾನಿ ಲಾಲ್ > ಬಹಾದ್ದೂರ್ ಶಾಸ್ತ್ರಿಯವರನ್ನು > ನಾವೂ ಮರೆಯುವುದು ಬೇಡ. > -ಒಂದೇ ಭಾರತ ಶ್ರೇಷ್ಠ ಭಾರತ > #ಜೈ ಹಿಂದ > ಹೀಗೆ ಬದುಕಿದ್ದರು ನಮ್ಮ ಶಾಸ್ತ್ರೀಜಿ. > (ತಪ್ಪದೆ ಈ ಸಂದೇಶ ಶೇರ್ ಮಾಡಿ) > > ಎರಡು ಘಂಟೆ ಯುದ್ಧ ಮುಂದುವರಿದಿದ್ದರೆ,ಭಾರತೀಯ ಸೇನೆ ಪಾಕಿಸ್ತಾನದ ಲಾಹೋರ್ ತನಕ ತನ್ನ > ಅಧಿಪತ್ಯವನ್ನು ಸ್ಥಾಪಿಸುತ್ತಿತ್ತು. > > ಎಚ್ಚೆತ್ತ ಪಾಕಿಸ್ತಾನ ಅಮೇರಿಕದ ಮುಂದೆ ಮಂಡಿಯೂರಿ ಕೂತಿತು.ಯುದ್ಧವನ್ನು ನಿಲ್ಲಿಸಲು > ಭಾರತಕ್ಕೆ ಸೂಚಿಸುವಂತೇ ಗೋಗರೆಯಿತು. > > ಆಗ ಅಮೇರಿಕದ ಗೋಧಿ ಭಾರತಕ್ಕೆ ಆಮದಾಗುತ್ತಿತ್ತು.ಆ ಗೋಧಿಯ ಗುಣಮಟ್ಟ > ಹೇಗಿತ್ತೆಂದರೆ,ಪ್ರಾಣಿಗಳು ತಿನ್ನಲೂ ಅಸಾಧ್ಯವಾದದ್ದು.ಈ ಆಮದು ಒಪ್ಪಂದಕ್ಕೆ ಸಹಿ ಹಾಕಿದ್ದು > ಜವಾಹರಲಾಲ್ ನೆಹರೂ.ಪಾಕಿಸ್ತಾನದ ಜೊತೆಗಿನ ಯುದ್ಧವನ್ನು ನಿಲ್ಲಿಸದಿದ್ದರೆ,ಗೋಧಿಯ ರಫ್ತನ್ನು > ನಿಲ್ಲಿಸುತ್ತೇವೆಂಬ ಸೂಚನೆ ಅಮೇರಿಕದಿಂದ ಶಾಸ್ತ್ರೀಜಿಯವರಿಗೆ ಬಂತು.ಶಾಸ್ತ್ರೀಜಿಯವರಿಂದ > ಬಂದ ಉತ್ತರ, “ನಿಲ್ಲಿಸಿ ತೊಂದರೆಯಿಲ್ಲ” > > “ಹೊಟ್ಟೆಗೆ ಆಹಾರವಿಲ್ಲದಿದ್ದರೆ ಭಾರತೀಯರು ಸಾಯುತ್ತಾರೆ”ಅಮೇರಿಕದ ಕುಚೋದ್ಯ > ಪ್ರತಿಕ್ರಿಯೆ..!! > > “ದೊಡ್ಡು ಕೊಟ್ಟು ನಿಮ್ಮ ಕಳಪೆಗುಣಮಟ್ಟದ ಗೋಧಿಯನ್ನು ತಿಂದು ಆರೋಗ್ಯ > ಕೆಡಿಸಿಕೊಳ್ಳುವುದಕ್ಕಿಂತ,ಹಸಿವಿನಿಂದ ಸಾಯುವುದೇ ವಾಸಿ.ಇಂದಿನಿಂದ ನಿಮ್ಮ ಗೋಧಿ ನಮಗೆ > ಬೇಕಿಲ್ಲ” ಶಾಸ್ತ್ರೀಜಿಯವರ ತೀಕ್ಷ್ಣ ಪ್ರತಿಕ್ರಿಯೆ. > > ದೆಹಲಿಯ ರಾಮಲೀಲಾ ಮೈದಾನದಲ್ಲಿ ದೇಶದ ಜನತೆಯನ್ನುದ್ದೇಶಿಸಿ ಶಾಸ್ತ್ರೀಜಿ ಮಾತನಾಡುತ್ತಾರೆ.. > > “ಪಾಕಿಸ್ತಾನದೊಂದಿಗೆ ಯುದ್ಧ ನಡೆಯುತ್ತಿದೆ.ಅಮೇರಿಕದಿಂದ ಗೋಧಿ ಆಮದಾಗುವುದು > ನಿಂತಿದೆ.ದೇಶದ ಜನ ಸಹಕರಿಸಬೇಕಿದೆ.ಒಂದು..ನೀವು ನೇರವಾಗಿ ಸೇನೆಗೆ ಧನ ಅಥವಾ ಆಹಾರದ > ಸಹಾಯವನ್ನು ಮಾಡಬಹುದು.ಎರಡು..ಪ್ರತಿ ಸೋಮವಾರ ನೀವು ಉಪವಾಸವೃತವನ್ನು ಆಚರಿಸಬಹುದು.ಇದರಿಂದ > ದೇಶದ ಹಣಕಾಸಿನ ವ್ಯವಹಾರ ಸರಾಗವಾಗಿ ನಡೆಯಬಹುದು.ಇಲ್ಲದಿದ್ದರೆ ದೇಶ ಆರ್ಥಿಕ ಸಂಕಷ್ಟಗಳನ್ನು > ಎದುರಿಸಬೇಕಾಗಬಹುದು” > > ಶಾಸ್ತ್ರೀಜಿಯವರ ಈ ಕರೆಗೆ ಇಡೀ ದೇಶ ಓಗೊಟ್ಟಿತು.ಹಲವರು ಸೇನೆಗೆ ಸಹಾಯ ಮಾಡಿದರು.ಲಕ್ಷಾಂತರ > ಜನ ಸೋಮವಾರದ ಉಪವಾಸವನ್ನು ಆರಂಭಿಸಿದರು.ಸ್ವತಃ ಶಾಸ್ತ್ರೀಜಿಯವರೂ ಸೋಮವಾರದಂದು > ಉಪವಾಸವೃತವನ್ನು ಕೈಗೊಂಡರು. > > ಶಾಸ್ತ್ರೀಜಿಯವರ ಪತ್ನಿ,ಲಲಿತಾದೇವಿಯವರು ಅನಾರೋಗ್ಯಪೀಡಿತರಾಗಿದ್ದರು.ಮನೆಗೆಲಸಕ್ಕೆಂದು > ಕೆಲಸದವಳೊಬ್ಬಳು ಬರುತ್ತಿದ್ದಳು.ಶಾಸ್ತ್ರೀಜಿಯವರು ಮಹಿಳೆಗೆ ನಾಳೆಯಿಂದ ಕೆಲಸಕ್ಕೆ ಬರಬೇಡ > ಎಂದರು.ಆಕೆ”ಅಲ್ಲ,ನಿಮ್ಮ ಬಟ್ಟೆಯನ್ನು ತೊಳೆಯುವುದು,ಮನೆಯನ್ನು ಸ್ವಚ್ಛಗೊಳಿಸುವುದು,ನಿಮ್ಮ > ಪತ್ನಿಯ ಆರೈಕೆಯನ್ನು ಯಾರು ಮಾಡಿಕೊಡುತ್ತಾರೆ ಸ್ವಾಮೀ”ಎಂದು ಕೇಳಿದಳು. > > “ದೇಶಕ್ಕಾಗಿ ಇದು ಅನಿವಾರ್ಯವಮ್ಮಾ.ನಿನಗೆ ಕೊಡುವ ಸಂಬಳದ ಹಣವಾದರೂ ಉಳಿದೀತು.ದೇಶದ > ಒಳಿತಿಗಾದೀತು” ಎಂದು ಹೇಳಿದರು.ನಂತರ ಮನೆಯ ಪ್ರತಿಯೊಂದು ಕೆಲಸವನ್ನೂ ಶಾಸ್ತ್ರೀಜಿಯವರೇ > ನಿಭಾಯಿಸುತ್ತಿದ್ದರು. > > ಶಾಸ್ತ್ರೀಜಿಯವರ ಮಕ್ಕಳಿಗೆ ಇಂಗ್ಲೀಷ್ ಹೇಳಿಕೊಡಲೆಂದು ಟ್ಯೂಟರ್ ಬರುತ್ತಿದ್ದರು.ಅವರನ್ನೂ > ಕೆಲಸದಿಂದ ವಿಮುಕ್ತಗೊಳಿಸಿದರು.”ಮಕ್ಕಳು ಇಂಗ್ಲೀಷಿನಲ್ಲಿ ಫೇಲಾಗುತ್ತಾರೆ”ಟ್ಯೂಟರ್ > ಹೇಳಿದ್ದಕ್ಕೆ ಶಾಸ್ತ್ರೀಜಿ,”ಆಗಲಿ ಬಿಡಿ ಇಂಗ್ಲೀಷ್ ನಮ್ಮ ಭಾಷೆಯಲ್ಲ.ಇಂಗ್ಲಿಷರು > ಹಿಂದಿಯನ್ನು ಬರೆದರೆ ಅವರೂ ಫೇಲಾಗುತ್ತಾರೆ”ಎಂದರು. > > ಒಂದು ದಿನ ಶಾಸ್ತ್ರೀಜಿಯವರ ಪತ್ನಿ,ಹರಿದುಹೋಗಿರುವ ಅವರ ಧೋತಿಯನ್ನು ನೋಡಿ “ಒಂದು ಹೊಸ > ಧೋತಿಯನ್ನಾದರೂ ತೆಗೆದುಕೊಳ್ಳಬಾರದೇ?”ಎಂದು ಕೇಳುತ್ತಾರೆ.”ಅದನ್ನು ಕೊಳ್ಳಲು > ಹಣವೆಲ್ಲಿದೆ..?ಬರುವ ಸಂಬಳವನ್ನೂ ಬಿಟ್ಟಾಗಿದೆ.ಮನೆಯ ಖರ್ಚುಗಳನ್ನು ಕಡಿಮೆ ಮಾಡು” > ಎಂದಿದ್ದರು. > > ಅಕ್ಟೋಬರ್ ಎರಡು ಬರುತ್ತಿದೆ.ಶಾಸ್ತ್ರೀಜಿಯವರ ಜನ್ಮದಿನ.ನಿರ್ಲಕ್ಷ್ಯಕ್ಕೊಳಗಾಗಿರುವ > ಸರಳ,ಸಜ್ಜನ ಮಹಾಪುರುಷನನ್ನು ನಾವಂದು ಸ್ಮರಿಸಬೇಕಿದೆ.. Forward this guys be proud > about shastriji. > ವಾಟ್ಸಪ್ ನಲ್ಲಿ ಬಂದ ಬರಹ > > -- > ----------- > 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. > - > https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform > 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. > - > http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ > 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ > ನೀಡಿ - > http://karnatakaeducation.org.in/KOER/en/index.php/Portal:ICT_Literacy > 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ > ತಿಳಿಯಲು - > http://karnatakaeducation.org.in/KOER/en/index.php/Public_Software > ----------- > --- > You received this message because you are subscribed to the Google Groups > "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. > To unsubscribe from this group and stop receiving emails from it, send an > email to [email protected]. > To post to this group, send email to [email protected]. > For more options, visit https://groups.google.com/d/optout. > -- ----------- 1.ವಿಷಯ ಶಿಕ್ಷಕರ ವೇದಿಕೆಗೆ ಶಿಕ್ಷಕರನ್ನು ಸೇರಿಸಲು ಈ ಅರ್ಜಿಯನ್ನು ತುಂಬಿರಿ. -https://docs.google.com/forms/d/e/1FAIpQLSevqRdFngjbDtOF8YxgeXeL8xF62rdXuLpGJIhK6qzMaJ_Dcw/viewform 2. ಇಮೇಲ್ ಕಳುಹಿಸುವಾಗ ಗಮನಿಸಬೇಕಾದ ಕೆಲವು ಮಾರ್ಗಸೂಚಿಗಳನ್ನು ಇಲ್ಲಿ ನೋಡಿ. -http://karnatakaeducation.org.in/KOER/index.php/ವಿಷಯಶಿಕ್ಷಕರವೇದಿಕೆ_ಸದಸ್ಯರ_ಇಮೇಲ್_ಮಾರ್ಗಸೂಚಿ 3. ಐ.ಸಿ.ಟಿ ಸಾಕ್ಷರತೆ ಬಗೆಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದಲ್ಲಿ ಈ ಪುಟಕ್ಕೆ ಭೇಟಿ ನೀಡಿ - http://karnatakaeducation.org.in/KOER/en/index.php/Portal:ICT_Literacy 4.ನೀವು ಸಾರ್ವಜನಿಕ ತಂತ್ರಾಂಶ ಬಳಸುತ್ತಿದ್ದೀರಾ ? ಸಾರ್ವಜನಿಕ ತಂತ್ರಾಂಶದ ಬಗ್ಗೆ ತಿಳಿಯಲು -http://karnatakaeducation.org.in/KOER/en/index.php/Public_Software ----------- --- You received this message because you are subscribed to the Google Groups "KannadaSTF - ಕನ್ನಡ ಭಾಷಾ ಶಿಕ್ಷಕರ ವೇದಿಕೆ" group. To unsubscribe from this group and stop receiving emails from it, send an email to [email protected]. To view this discussion on the web, visit https://groups.google.com/d/msgid/kannadastf/CAMFR0u9v%2BqpbkD8Qm%2Bu%3Dhr0behywCe4ncCLneNv_V_eyg5qHhA%40mail.gmail.com.
